ಬೆಂಗಳೂರು: ಚಂದ್ರಯಾನ-3 ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 26ರಂದು ಇಸ್ರೋ ಕಚೇರಿಗೆ ಭೇಟಿ ನೀಡಲಿದ್ದಾರೆ. ಬೆಂಗಳೂರಿನಲ್ಲಿರುವ ಇಸ್ರೋ ಕೇಂದ್ರ ಕಚೇರಿಗೆ ಭೇಟಿ ನೀಡಲಿದ್ದಾರೆ. ಆಗಸ್ಟ್ 26ರಂದು ಸಂಜೆ 5.55ಕ್ಕೆ ಎಚ್ಎಎಲ್ ಏರ್ಪೋರ್ಟ್ಗೆ ಆಗಮಿಸಲಿರುವ ಪ್ರಧಾನಿ, ಸಂಜೆ 6.30ರವರೆಗೆ ಏರ್ಪೋರ್ಟ್ನಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ರಾತ್ರಿ 7 ಗಂಟೆಗೆ ಇಸ್ರೋ ಕೇಂದ್ರ ಕಚೇರಿಗೆ ಭೇಟಿ ನೀಡಲಿದ್ದಾರೆ. ರಾತ್ರಿ 8 ಗಂಟೆಯವರೆಗೆ ಇಸ್ರೋ ಕಚೇರಿಯಲ್ಲಿ ಪ್ರಧಾನಿ ಮೋದಿ ಸಭೆ ನಡೆಸಲಿದ್ದು, ನಂತರ ರಾತ್ರಿ 8.35ಕ್ಕೆ ಬೆಂಗಳೂರಿನಿAದ ದೆಹಲಿಗೆ ನಿರ್ಗಮಿಸಲಿದ್ದಾರೆ.
ಪ್ರಸ್ತುತ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸುವ ಸಲುವಾಗಿ ಮೋದಿ ಅವರು ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದ್ದು, ಅಲ್ಲಿನ ಜೊಹಾನ್ಸ್ಬರ್ಗ್ನಲ್ಲಿದ್ದಾರೆ. ಅಲ್ಲಿಂದಲೇ ಅವರು ನೇರವಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ.
ಚಂದ್ರಯಾನ-3 ರ ವಿಕ್ರಂ ಲ್ಯಾಂಡರ್ ಬುಧವಾರ ಸಂಜೆ ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಲ್ಯಾಂಡ್ ಆಗಿದೆ. ಆ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತವು ಮಹತ್ತರ ಮೈಲಿಗಲ್ಲು ಸಾಧಿಸಿದೆ. ಲ್ಯಾಂಡಿAಗ್ ಕ್ಷಣದಲ್ಲಿ ದಕ್ಷಿಣ ಆಫ್ರಿಕಾದಿಂದಲೇ ಇಸ್ರೋ ತಂಡದ ಜತೆ ವರ್ಚುವಲ್ ಆಗಿ ಭಾಗವಹಿಸಿದ್ದ ಮೋದಿ, ಚಂದ್ರಯಾನದ ಯಶಸ್ಸಿನ ಬೆನ್ನಲ್ಲೇ ಇಸ್ರೋ ಅಧ್ಯಕ್ಷ ಸೋಮನಾಥ್ ಅವರಿಗೆ ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಇಡೀ ಇಸ್ರೋ ತಂಡಕ್ಕೆ ಅಭಿನದನೆ ತಿಳಿಸುವಂತೆ ಸೊಮನಾಥ್ ಅವರಿಗೆ ತಿಳಿಸಿದ್ದಾರೆ.
ಜುಲೈ 14 ರಂದು ಉಡಾವಣೆಗೊಂಡ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಚಂದ್ರಯಾನ-3 ರ ಲ್ಯಾಂಡರ್ ವಿಕ್ರಂ ಬುಧವಾರ ಸಂಜೆ (ಆಗಸ್ಟ್ 23) ಸುಮಾರು 6.04 ಕ್ಕೆ ಚಂದ್ರನ ಮೇಲ್ಮೆöÊಯಲ್ಲಿ ಯಶಸ್ವಿಯಾಗಿ ಲ್ಯಾಂಡಿAಗ್ ಮಾಡಿದೆ. ಇದರೊಂದಿಗೆ ಬಾಹ್ಯಾಕಾಶ ಸಂಶೋಧನೆ ಕ್ಷೇತ್ರದಲ್ಲಿ ಭಾರತವು ಮಹತ್ವದ ಮೈಲಿಗಲ್ಲು ಸ್ಥಾಪಿಸಿದಂತಾಗಿದೆ. ಈ ಮೂಲಕ ಚಂದ್ರನ ದಕ್ಷಿಣ ಧ್ರುವ ಪ್ರದೇಶವನ್ನು ಅನ್ವೇಷಿಸುವ ಮೊದಲ ದೇಶವಾಗಿ ಭಾರತ ಹೊರಹೊಮ್ಮಿದೆ.
ಚಂದ್ರಯಾನ-3 ಯಶಸ್ವಿ; ಆ.26ರಂದು ಇಸ್ರೋ ಕೇಂದ್ರ ಕಚೇರಿಗೆ ಮೋದಿ ಭೇಟಿ
Leave a comment