ತುಮಕೂರು: ಮರ್ಯಾದಾ ಹತ್ಯೆ ಪ್ರಕರಣದಲ್ಲಿ ಅಪ್ರಾಪ್ತ ಬಾಲಕಿಯನ್ನು ಆಕೆಯ ತಂದೆ, ಸಹೋದರ ಮತ್ತು ಚಿಕ್ಕಪ್ಪ ಕತ್ತು ಹಿಸುಕಿ ಕೊಂದಿರುವ ಅಮಾನುಷ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
17 ವರ್ಷದ ಸಂತ್ರಸ್ತೆ ನೇತ್ರಾವತಿ ಪರಿಶಿಷ್ಟ ಜಾತಿಗೆ ಸೇರಿದ ಹುಡುಗನನ್ನು ಪ್ರೀತಿಸುತ್ತಿದ್ದಳು. ಇದರಿಂದ ಆಕ್ರೋಶಗೊಂಡ ಆಕೆಯ ಕುಟುಂಬ ಈ ಕೃತ್ಯ ಎಸಗಿದೆ.
ಮೂವರು ಆರೋಪಿಗಳಾದ ಪರಶುರಾಮ, ಶಿವರಾಜು, ತುಕಾರಾಂ ಅವರನ್ನು ಬಂಧಿಸಲಾಗಿದೆ ಎಂದು ತುಮಕೂರು ಎಸ್ಪಿ ರಾಹುಲ್ ಕುಮಾರ್ ಶಹಾಪುರವಾಡ್ ಶುಕ್ರವಾರ ತಿಳಿಸಿದ್ದಾರೆ.
ಪೋಲೀಸರ ಪ್ರಕಾರ, ಸಂತ್ರಸ್ತೆ ಬುಡಕಟ್ಟು ಜನಾಂಗಕ್ಕೆ ಸೇರಿದವಳು ಮತ್ತು ಹಾಸ್ಟೆಲ್ನಲ್ಲಿ ವಾಸಿಸುತ್ತಿದ್ದಳು. ಈ ಸಮಯದಲ್ಲಿ ಆಕೆ ಕುಮಾರ್ನನ್ನು ಪ್ರೀತಿಸುತ್ತಿದ್ದಳು.
ಎರಡು ವಾರಗಳ ಹಿಂದೆ ಬಾಲಕಿ ಕಾಣೆಯಾಗಿದ್ದಳು. ಆದರೆ, ಆಕೆಯ ಪೋಷಕರು ಆಕೆಯನ್ನು ಹುಡುಕಿ ಜೂನ್ 9ರಂದು ಮನೆಗೆ ಕರೆತಂದಿದ್ದಾರೆ. ಹುಡುಗನೊಂದಿಗಿನ ಸಂಬಂಧವನ್ನು ಕೊನೆಗೊಳಿಸಲು ಹುಡುಗಿ ಒಪ್ಪದಿದ್ದಾಗ, ಆರೋಪಿಗಳು ವಿಷ ಕುಡಿಯುವಂತೆ ಒತ್ತಾಯಿಸಿದ್ದಾರೆ.
ಬಾಲಕಿ ಪ್ರತಿರೋಧ ತೋರಿದಾಗ ಆಕೆಯ ತಂದೆ ಪರಶುರಾಮ, ಸಹೋದರ ಶಿವರಾಜು, ಚಿಕ್ಕಪ್ಪ ತುಕಾರಾಂ ಸೇರಿ ಹಗ್ಗದಿಂದ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ವಿಷ ಸೇವಿಸಿ ಬಾಲಕಿ ಸಾವಿಗೀಡಾಗಿದ್ದಾಳೆ ಎಂದು ಹೇಳಿಕೊಂಡು ಕುಟುಂಬದವರು ಆಕೆಯ ಅಂತ್ಯ ಸಂಸ್ಕಾರವನ್ನೂ ಮಾಡಿದ್ದಾರೆ.
ಆದರೆ, ಅನುಮಾನಗೊಂಡ ಗ್ರಾಮಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.
ಆರಂಭದಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿ ಕೊಲೆ ಪ್ರಕರಣವನ್ನಾಗಿ ಪರಿವರ್ತಿಸಿ ಆರೋಪಿಗಳನ್ನು ಬಂಧಿಸಿದ್ದಾರೆ
ಮರ್ಯಾದಾ ಹತ್ಯೆ: ದಲಿತ ಯುವಕನೊಂದಿಗೆ ಪ್ರೀತಿಸಿದಕ್ಕೆ ಬಾಲಕಿಯ ಕೊಲೆ
Leave a comment